ವಿಶ್ವಕರ್ಮ ಜಯಂತಿಯನ್ನು ಅದ್ಧೂರಿಯಾಗಿಆಚರಿಸೋಣ:ಸಹಾಯಕ ಆಯುಕ್ತ ಮೊಹ್ಮದ ನಯೀಮ್ ಮೋಮಿನ್

ಬೀದರ ಸೆ.10: ಸೆಪ್ಟೆಂಬರ್.17 ರಂದು ಆಚರಿಸುವ ವಿಶ್ವಕರ್ಮ ಜಯಂತಿಯನ್ನು ಈ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದು ಸಹಾಯಕ ಆಯುಕ್ತರಾದ ಮೊಹ್ಮದ ನಯೀಮ್ ಮೋಮಿನ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೆಪ್ಟೆಂಬರ್.17 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ವಿವಿಧ ಕಲಾ ತಂಡಗಳೊಂದಿಗೆ ಮೇರವಣಿಗೆ ಆರಂಭವಾಗಿ ಡಾ.ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ 2 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ಹೋದ ವರ್ಷಕ್ಕಿಂತ ಈ ವರ್ಷ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಚೆನ್ನಾಗಿ ಮಾಡೋಣ ಹಾಗೂ ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.

ವಿಶ್ವಕರ್ಮ ಇವರ ಕುರಿತು ಉಪನ್ಯಾಸ ನೀಡಲು ಬೀದರನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಬಿ.ಕೆ.ಪ್ರತಿಮಾ ಬೇಹನಜೀ ಅವರನ್ನು ಈ ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸಕರಾಗಿ ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅದೇ ದಿನ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಇರುವುದರಿಂದ ಸಮಯದಲ್ಲಿ ಅಲ್ಪಸ್ವಲ್ಪ ಬದಲಾವಣೆ ಮಾಡಿ ಈ ಕಾರ್ಯಕ್ರಮವನ್ನು ಆಚರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಭೆಯಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಅಭಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.