ವಿಶ್ವಕ್ಕೆ ಕಲ್ಯಾಣ ಕರ್ನಾಟಕದ ಕೊಡುಗೆ ಅನನ್ಯ

ಕಲಬುರಗಿ: ಸೆ.14:ಕಲ್ಯಾಣ ಕರ್ನಾಟಕ ಪ್ರದೇಶವು ಅಭಿವೃದ್ಧಿ ದೃಷ್ಟಿಯಿಂದ ಹಿಂದುಳಿದೆ. ಆದರೆ ವಿಶ್ವಕ್ಕೆ ಪ್ರಥಮ ಸಂಸತ್ತು, ದೇಶಕ್ಕೆ ಶ್ರೇಷ್ಠ ಕಾನೂನು ಗ್ರಂಥವಾದ ‘ಮಿತಾಕ್ಷರ’ ನೀಡಿದ, ನಾಡಿಗೆ ಪ್ರಥಮ ಕನ್ನಡ ಗ್ರಂಥ ‘ಕವಿರಾಜಮಾರ್ಗ’ ಕೊಟ್ಟ ಪುಣ್ಯಭೂಮಿ. ದೇಶದ ಸ್ವಾತಂತ್ರ, ಕಲೆ, ಸಾಹಿತ್ಯ, ಸಾಂಸ್ಕøತಿಕ ಕೇತ್ರಗಳ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ‘ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ’ವನ್ನು ಸರ್ದಾರ ವಲ್ಲಭಬಾಯಿ ಪಟೇಲ್‍ರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಂಸ್ಥೆಯ ಕಾರ್ಯದರ್ಶಿ ಹಾಗೂ ಪ್ರಾಚಾರ್ಯರಾದ ಭೀಮಾಶಂಕರ ಎಸ್.ಘತ್ತರಗಿ ಮಾತನಾಡಿ, ಕಲ್ಯಾಣ ರಾಷ್ಟ್ರದ ಪರಿಕಲ್ಪನೆ ಶರಣರ ನೆಲಯಾದ ಇದು ಹಿಂದುಳಿದ ಪಟ್ಟಿಯಿಂದ ಸಂಪೂರ್ಣವಾಗಿ ಹೊರಬರಬೇಕಾದರೆ ಪ್ರತಿಯೊಬ್ಬರು ತಮ್ಮ ಕಾರ್ಯಗಳನ್ನು ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. ದೊರೆಯುವ ಎಲ್ಲಾ ಸೌಕರ್ಯ ಮತ್ತು ಯೋಜನೆಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಂಡು ಈ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಿವಯೋಗಪ್ಪ ಬಿರಾದಾರ, ಜಯಪ್ರಕಾಶ ಕಟ್ಟಿಮನಿ, ಅರ್ಚನಾ ಎಂ.ಹೀರಾಪುರ, ಅಶ್ವಿನಿ ಜೆ. ಪಾಟೀಲ್, ಮಂಗಲಾ ಯಾಧವ, ರವಿ ಬಿರಾಜಾದಾರ, ಸುನಿಲ್ ಚೌಧರಿ, ನವೀನಕುಮಾರ, ಗುರುರಾಜ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.