ವಿಶ್ವದಲ್ಲಿಯೇ ಭಾರತದ ಸಂವಿಧಾನ ಸರ್ವಶ್ರೇಷ್ಠ : ತಹಶೀಲ್ದಾರ ರಾಜೇಶ್ ಬುರ್ಲಿ

ಅಥಣಿ : ಸೆ.16:ಭಾರತ ಸಂವಿಧಾನದ ಪೀಠಿಕೆ ಓದುವದರಿಂದ ನಾಗರಿಕ ಶಿಕ್ಷಣ, ದೇಶಭಕ್ತಿ, ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು, ಏಕತೆ,
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದಡಿ ಡಾ.ಬಿ ಆರ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನ ನಮ್ಮೆಲ್ಲರಿಗೆ ಹೆಮ್ಮೆ, ವಿಶ್ವದಲ್ಲಿಯೇ ಭಾರತದ ಸಂವಿಧಾನವು ಸರ್ವಶ್ರೇಷ್ಠವಾಗಿದೆ. ಎಂದು ತಹಸೀಲ್ದಾರ ರಾಜೇಶ ಬುರ್ಲಿ ಹೇಳಿದರು.
ಅವರು ಶುಕ್ರವಾರ ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ರಾಜ್ಯ ಸರ್ಕಾರ ನಮ್ಮ ಸಂವಿಧಾನದ ಮಹತ್ವ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರ ಆಶಯಗಳನ್ನು ಎಲ್ಲರಿಗೂ ಮನವರಿಕೆ ಮಾಡುವ ಉದ್ದೇಶದಿಂದ ಈ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರಿಗೂ ಸಮಾನ ನ್ಯಾಯ ಹಕ್ಕು, ಸ್ತ್ರೀ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಮಾಧ್ಯಮ ಸ್ವಾತಂತ್ರ್ಯ, ಜೊತೆಗೆ ಮೂಲಭೂತ ಹಕ್ಕುಗಳು, ಜವಾಬ್ದಾರಿ ಮತ್ತು ಕರ್ತವ್ಯಗಳ್ಳನ್ನು ಎಚ್ಚರಿಸಿ ಸಂವಿಧಾನದ ಮೌಲ್ಯ ಜಾರಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ ಪ್ರಸ್ತಾವಿಕವಾಗಿ ಮಾತನಾಡಿದರು, ಕೆ. ಟಿ. ಕಾಂಬಳೆ ಭಾರತ ಸಂವಿಧಾನ ಪೀಠಿಕೆಯ ವಾಚನ ಮಾಡಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಮೊರಟಗಿ, ಜಿ.ಪಂ ಇಂಜಿನಿಯರಿಂಗ್ ವಿಭಾಗದ ಅಭಿಯಂತರ ವೀರಣ್ಣ ವಾಲಿ. ಸಣ್ಣ ನೀರಾವರಿ ಇಲಾಖೆ ಶ್ರೀಕಾಂತ ಮಾಕಾಣಿ. ಕೃಷಿ ಅಧಿಕಾರಿ ನಿಂಗನಗೌಡ ಬಿರಾದಾರ. ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ. ಮುಖಂಡರಾದ ಸಿದ್ಧಾರ್ಥ ಸಿಂಗೆ. ಪ್ರಕಾಶ ಅಂಬೇಡ್ಕರ್ ಬ್ರಿಗೇಡ್ ತಾಲೂಕಾ ಅಧ್ಯಕ್ಷ ಮಹಾಂತೇಶ ಬಾಡಗಿ. ಮಂಜು ಹೊಳಿಕಟ್ಟಿ. ಸಂಜೀವ ಕಾಂಬಳೆ. ಶಶಿ ಸಾಳವೆ. ರಮೇಶ ಸಿಂದಗಿ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮತ್ತು ವಿವಿಧ ಸಂಘ ಸಂಸ್ಥೆಯ ಮುಖಂಡರು, ದಲಿತ ಸಂಘಟನೆಗಳ ಮುಖಂಡರು, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು, ಜಿ.ಎಂ ಸ್ವಾಮಿ ವಂದಿಸಿದರು.