
ಕಲಬುರಗಿ:ಅ.25: ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವುದು, ಸಮಾನತೆ ಆಧಾರದ ಮೇಲೆ ವಿಶ್ವದಲ್ಲಿನ ರಾಷ್ಟ್ರಗಳಲ್ಲಿನ ಸ್ನೇಹ ಸಂಬಂಧಗಳನ್ನು ಬೆಳೆಸುವುದು, ಅಂತಾರಾಷ್ಟ್ರೀಯ ಸಹಾಯಕ್ಕೆ ಬೆಂಬಲ ನೀಡಿ ವಿಶ್ವದಲ್ಲಿನ ಆರ್ಥಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಮಾನವೀಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ಮತ್ತು ಮಾನವನ ಮೂಲಭೂತ ಹಕ್ಕುಗಳನ್ನು ಉತ್ತೇಜಿಸುವಂತಹ ಮುಂತಾದ ಕಾರ್ಯಗಳನ್ನು ಮಾಡುವ ಮೂಲಕ ವಿಶ್ವಸಂಸ್ಥೆ ವಿಶ್ವದ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.