ವಿಶ್ವನಾಥ್ ಹೇಳಿಕೆಗೆ ಜೆಡಿಎಸ್ ಮುಖಂಡರ ಖಂಡನೆ

ಸಂಜೆವಾಣಿ ನ್ಯೂಸ್
ಮೈಸೂರು: ಫೆ.23:- ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು ಎಂಬ ಕಾರಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚಮಚಾಗಿರಿ ಮಾಡುತ್ತಿದ್ದಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಹೇಳಿಕೆ ಖಂಡನೀಯ ಎಂದು ಜೆಡಿಎಸ್ ರಾಜ್ಯ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಡಿ.ದೇವೇಗೌಡರು ನನಗೆ ರಾಜಕೀಯ ಪುನರ್ಜನ್ಮ ನೀಡಿದರು ಎಂದು ಹೇಳಿಕೆ ನೀಡಿದ್ದ ವಿಶ್ವನಾಥ್ ನಿಯತ್ತಿಲ್ಲದ ರಾಜಕಾರಣಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲಾ ಪಕ್ಷಗಳಿಂದ ತಿರಸ್ಕೃತಗೊಂಡಿರುವ ಅವರು ತಮ್ಮ ಕೊಳಕು ಮನಸ್ಥಿತಿ ಪ್ರದರ್ಶಿಸಿದ್ದಾರೆ. ಬಿಜೆಪಿಯಿಂದ ಪರಿಷತ್ ಸ್ಥಾನ ಪಡೆದು ಕಾಂಗ್ರೆಸ್ ಹೊಗಳುತ್ತಿರುವ ಅವರ ನಡೆಯೇ ಚಮಚಾಗಿರಿ ಎಂದು ಟೀಕಿಸಿದರು.
ಮಂಡ್ಯ ಲೋಕಸಭೆಯಲ್ಲಿ ಸ್ಪರ್ಧೆ ಮಾಡಬಹುದು ಎಂಬ ಕಾರಣಕ್ಕೆ ಡಾ.ಸಿ.ಎನ್.ಮಂಜುನಾಥ್ ಅವರು ನಿರ್ಮಿಸಿದ ಮೈಸೂರು ಜಯದೇವ ಆಸ್ಪತ್ರೆ ಕಾಮಗಾರಿ ತನಿಖೆ ಮಾಡುತ್ತೇವೆ ಎನ್ನುತ್ತಿರುವ ಕಾಂಗ್ರೆಸ್ ಪಕ್ಷದ ನಿಲುವು ನಾಚಿಕೆಗೇಡಿನದು.
ಪಕ್ಷ ಮೈಸೂರು, ಹಾಸನ, ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿದ್ದು, ಪ್ರಯತ್ನ ನಡೆಸಿದ್ದೇವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಜಯರಾಮ್, ಉಮೇಶ್, ಮಂಜುನಾಥ್, ಎಂ.ಎನ್. ರಾಮು, ಮುದ್ದುರಾಜ್ ಉಪಸ್ಥಿತರಿದ್ದರು.