ವಿಶ್ವಪರಿಸರ ದಿನಾಚರಣೆ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ

ಕೋಲಾರ,ಜೂ,೬:ವಿಶ್ವಪರಿಸರ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಹಂತದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಕ್ಲಾಕ್ಷಪಾಲನ್ ಬಹುಮಾನ ವಿತರಿಸಿದರು.
ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಅರಣ್ಯ ಇಲಾಖೆ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಪರಿಸರ ದಿನದ ಅಂಗವಾಗಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ನಡೆಸಲಾದ ತಾಲ್ಲೂಕುಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲಾ ತಾಲ್ಲೂಕುಗಳ ೬೦ ವಿದ್ಯಾರ್ಥಿಗಳು ಆಗಮಿಸಿದ್ದು, ವಿಜೇತರಿಗೆ ಪರಿಸರಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಶಸ್ತಿಪತ್ರ, ಹಾಗೂ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಡಾ.ಕೆ.ರಾಜು, ಡಿಡಿಪಿಐ ಕೃಷ್ಣಮೂರ್ತಿ, ಬಿಇಒ ಕನ್ನಯ್ಯ, ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ, ಪಿಡಿಒ ಶಾಲಿನಿ, ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಮತ್ತಿತರರಿದ್ದರು.