ವಿಶ್ವಪರಿಸರ ದಿನಾಚರಣೆ

ಲಕ್ಷ್ಮೇಶ್ವರ,ಜೂ6 : ಪಟ್ಟಣದಲ್ಲಿ ಸೋಮವಾರ ಸಾಮಾಜಿಕರಣ ಇಲಾಖೆ ಮತ್ತು ಅರಣ್ಯ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸರ್ಕಾರಿ ಪ್ರಾಥಮಿಕ ಶಾಲೆ ನಂಬರ್ 1 ರಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಕ್ಕಳಿಗೆ ಸಸಿಗಳನ್ನು ವಿತರಿಸಿ ಮಾತನಾಡಿದ ಜಿಎಂಎಫ್ ಸಿ ಹಿರಿಯ ದಿವಾನಿ ನ್ಯಾಯಾಧೀಶೆ ಕೆ ಎಮ್ ಸರ್ವಮಂಗಳ ಅವರು ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಮಕ್ಕಳಲ್ಲಿ ಸಸಿಗಳನ್ನು ಬೆಳೆಸುವ ಗುಣಗಳನ್ನು ಬಳಸಬೇಕು ಎಂದರು ಪರಿಸರವನ್ನು ನಾವು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ ಇಲ್ಲದಿದ್ದರೆ ಪರಿಸರ ಮಾಲಿನ್ಯ ಹದಗೆಟ್ಟು ಇಡೀ ಮಾನವ ಸಂಕುಲಕ್ಕೆ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಸುಮಾ ಹಳೆಹೊಳಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ಕೌಶಿಕ್ ದಳವಾಯಿ ಅರಣ್ಯ ಪಾಲಕ ವಿಭೂತಿ ಮತ್ತು ನ್ಯಾಯವಾದಿಗಳು ಹಾಜರಿದ್ದರು.