ವಿಶ್ವಮಾನವ ದಿನಾಚರಣೆ

ದಾವಣಗೆರೆ ಡಿ.೩೦; ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಜಿಲ್ಲಾಡಳಿತ ದಾವಣಗೆರೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸರಳವಾಗಿ ಆಚರಿಸಲಾಯಿತು.
  ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಆನಂದ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಬಿ.ಎನ್ ಮಲ್ಲೇಶ್, ನಾಗರಾಜ್ ಮತ್ತಿತರರು ಉಪಸ್ಥಿತಿರಿದ್ದು, ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.