ವಿಶ್ವ ಆರೋಗ್ಯ ದಿನಾಚರಣೆ: ಆರೋಗ್ಯ ಜಾಗೃತಿ

ಗದಗ, ಏ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೆಡಕ್ರಾಸ್ ಸಂಸ್ಥೆ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ರವಿವಾರ ಲಿಂಗದಾಳ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಜಾಗೃತಿ ಹಾಗೂ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.
ಜಿಲ್ಲಾ ರೆಡ್ರ ಕ್ರಾಸ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಡಿ.ಸಾಮುದ್ರಿ ಅವರು ಕೂಲಿ ಕಾರ್ಮಿಕರಿಗೆ ಆರೋಗ್ಯ ಕುರಿತು ಅರಿವು ಮೂಡಿಸಿದರು. ಡಾ. ಬೂದೇಶ ಕಣಜ ಅವರು ವೈಯಕ್ತಿಕ ಆರೋಗ್ಯದ ಕುರಿತು ಹಾಗೂ ಆರೋಗ್ಯ ಸುರಕ್ಷತೆ ಬಗ್ಗೆ ಕೂಲಿಕಾರ್ಮಿಕರಿಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನನ್ನ ಮತ ನನ್ನ ಹಕ್ಕು, ಮತದಾನದ ದಿನದಂದು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುತ್ತೇನೆ, ಯಾವುದೇ ಆಮಿಷುಗಳಿಗೆ ನನ್ನ ಮತವನ್ನು ಮಾರಿಕೊಳ್ಳುವದಿಲ್ಲ ಎಂಬ ಇತ್ಯಾದಿ ಘೋಷಣೆಗಳನ್ನು ಕೂಗುವ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನಂದನ, ಗ್ರಾ.ಪಂ. ಪಿ.ಡಿ.ಓ ಸುವರ್ಣ ಸೇರಿದಂತೆ 400 ಅಧಿಕ ನರೇಗಾ ಕೂಲಿ ಕಾರ್ಮಿಕರು ಹಾಜರಿದ್ದರು.