
ಬೀದರ:ಎ.6:FPAI ಸಂಸ್ಥೆಯ ಅಧ್ಯಕ್ಷರಾದ ಡಾ. ನಾಗೇಶ ಪಾಟೀಲ್ – “FPAI ಸಂಸ್ಥೆಯಲ್ಲಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಕುರಿತು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಮಹಿಳೆಯರು ಸಮಯಕ್ಕೆ ಸರಿಯಾಗಿ ಈ ತಪಾಸಣೆಗೆ ಒಳಗಾಗಿ, ಚಿಕಿತ್ಸೆ ಪಡೆದು ತಮ್ಮ ಆರೋಗ್ಯ ತಾವೇ ಕಾಪಾಡಿಕೊಳ್ಳಬೇಕು” ಎಂದು ಕರೆ ನೀಡಿದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ (FPAI) ಬೀದರ ಶಾಖೆಂiÀiಲ್ಲಿ ಮುಂಚಿತವಾಗಿಯೇ ದಿನಾಂಕ: 05-04-2023 ರಂದು “ವಿಶ್ವ ಆರೋಗ್ಯ ದಿನ” ದ ಅಂಗವಾಗಿ ಮಹಿಳೆಯರಿಗಾಗಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಹಾಗೂ ಸ್ಥನ ಕ್ಯಾನ್ಸರ್” ಕುರಿತು ಅರಿವು/ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾಂiÀರ್iಕ್ರಮ ಉದ್ಘಾಟಿಸಿ ಮಾತನಾಡಿದ ಈPಂI ಸಂಸ್ಥೆಯ ಅಧ್ಯಕ್ಷರಾದ ಡಾ. ನಾಗೇಶ ಪಾಟೀಲ್ ಇವರು ಪ್ರತಿಯೊಬ್ಬರು ಪ್ರತಿನಿತ್ಯ ಯೋಗ, ಧ್ಯಾನ, ಪೌಷ್ಟಿಕ ಆಹಾರ ಸೇವನೆ ಇವುಗಳ ಜೊತೆಗೆ ಸಮಯಕ್ಕೆ ಅನುಸಾರವಾಗಿ ಮೂಲಭೂತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಮುಂದೆ ತಲೆದೋರುವ ಆರೋಗ್ಯ ಸಮಸ್ಯೆಯನ್ನು ಮುಂಚಿತವಾಗಿ ಗುರುತಿಸಿ, ಚಿಕಿತ್ಸೆ ತೆಗೆದುಕೊಂಡಾಗ ಪ್ರತಿಯೊಬ್ಬರು ಆರೋಗ್ಯವಂತರಾಗಿರಬಹುದು ಎಂದು ತಿಳಿಸಿದರು. ಹಾಗು ಇತ್ತೀಚಿಗೆ ಮಹಿಳೆಯರಲ್ಲಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಹಾಗು ಸ್ಥನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸುತ್ತಿರುವುದರಿಂದ ಮಹಿಳೆಯರಿಗೆ ಅನುಕೂಲವಾಗಲೆಂದು ಈPಂI ಸಂಸ್ಥೆಯಲ್ಲಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಕುರಿತು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಮಹಿಳೆಯರು ಸಮಯಕ್ಕೆ ಸರಿಯಾಗಿ ಈ ತಪಾಸಣೆಗೆ ಒಳಗಾಗಿ, ಚಿಕಿತ್ಸೆ ಪಡೆದು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಈPಂI ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಇವರು ಲಿಂಗ ಸಮಾನತೆ ಕುರಿತು ಮಾತನಾಡಿ, ಪ್ರತಿಯೊಬ್ಬರು ಹೆಣ್ಣು- ಗಂಡು ಎಂಬ ಭೇದ-ಭಾವನೆ ಇಲ್ಲದೇ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
FPAI ಸಂಸ್ಥೆಯ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ಬಿರಾದಾರ ಇವರು ವಿಶ್ವ ಆರೋಗ್ಯ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವಿವರಿಸುತ್ತಾ ಸಂಸ್ಥೆಯಲ್ಲಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಹಾಗೂ ಸ್ಥನ ಕ್ಯಾನ್ಸರ್ ಕುರಿತು ನೀಡುತ್ತಿರುವ ವಿಶೇóóóಷ ಆರೋಗ್ಯ ಸೇವೆಯ ಕುರಿತು ಮಾಹಿತಿ ತಿಳಿಸಿದರು.
FPAI ಸಂಸ್ಥೆಯ ವೈದ್ಯಾಧಿಕಾರಿಗಳಾದ ಡಾ. ಆಕಾಶ ಬುಳ್ಳಾ ಇವರು ಸ್ವಾಗತಿಸಿದರು ಹಾಗೂ ಮಹಿಳೆಯರ ಆರೋಗ್ಯದ ಕುರಿತು ಅರಿವು ಮೂಡಿಸಿದರು.
ಸಂಸ್ಥೆಯ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀಮತಿ ವಿಜಯಲಕ್ಷ್ಮಿ ಹುಡುಗೆ ಇವರು ಕಾರ್ಯಕ್ರಮದ ನಿರೂಪಣೆ ಮಾಡಿ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು ಹಾಗೂ FPAI ಸಂಸ್ಥೆಯ ಸಿಬ್ಬಂದಿವರ್ಗದವರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು.