ವಿಶ್ವ ಏಡ್ಸ್ ದಿನ ನಾಳೆ

ಕಲಬುರಗಿ,ನ.30-ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಶಿಕ್ಷಣ ಇಲಾಖೆ, ರೆಡ್ ರಿಬ್ಬನ್ ಕ್ಲಬ್ ಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಎನ್.ಎಸ್.ಎಸ್.ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನ ಮತ್ತು ಸನ್ಮಾನ ಕಾರ್ಯಕ್ರಮವನ್ನು ಡಿಸೆಂಬರ್ 1 ರಂದು ಬೆಳಿಗ್ಗೆ 10.30ಕ್ಕೆ ನಗರದ ಹಳೆ ಜಿಲ್ಲಾ ಪಂಚಾಯತ್ ಕೋಣೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ.ಚೌಗಲೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಶ್ ಶಶಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ ಅಧ್ಯಕ್ಷತೆ ವಹಿಸುವರು. ಜಿಮ್ಸ್ ಆಸ್ಪತ್ರೆ ನಿರ್ದೇಶಕಿ ಡಾ.ಕವಿತಾ ಪಾಟೀಲ ಜಿಲ್ಲಾ ಆಸ್ಪತ್ರೆ ಅಧೀಕ್ಷಕ ಡಾ.ಎ.ಎಸ್.ರುದ್ರವಾಡಿ ಅತಿಥಿಗಳಾಗಿ ಆಗಮಿಸುವರು. ನಿವೃತ್ತ ವೈದ್ಯಾಧಿಕಾರಿ ಡಾ.ದೇವಿಂದ್ರ ಮೈನಾಳೆ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹೆಚ್.ಐ.ವಿ/ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ ಸಿಬ್ಬಂದಿಗಳಿಗೆ ಸನ್ಮಾನಿಸಲಾಗುವುದು.