ವಿಶ್ವ ಏಡ್ಸ್ ದಿನ ಹಾಗೂ ಜನಜಾಗೃತಿ


ಗದಗ, ಡಿ.2: ಏಡ್ಸ್ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದರು.
ನಗರದ ಜೆ.ಟಿ.ಕಾಲೇಜಿನ ವಿಡಿಯೋ ಕಾನ್ಫರನ್ಸ ಹಾಲ್‍ದಲ್ಲಿ ಆಡಳಿತ, ಜಿಲ್ಲಾ ಪಂಚಾಯತÀ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್‍ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಜಿಮ್ಸ್‍ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಜಿಮ್ಸ್ ಸರಕಾರಿ ಶುಶ್ರೂಷಾ ಮಹಾವಿದ್ಯಾಲಯ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜ, ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜ, ಪಾಲನ ಗಾಲಾ ನರ್ಸಿಂಗ್ ಕಾಲೇಜ, ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆ, ಆಯ್.ಎಂ.ಎರಕ್ತ ಭಂಡಾರ, ಕೆ.ವಿ. ಹಂಚಿನಾಳ ನರ್ಸಿಂಗ್ ಕಾಲೇಜ, ರಕ್ಷಣೆಜಿಲ್ಲಾ ಮಹಿಳಾ ಒಕ್ಕೂಟ, ಸೃಷ್ಠಿ ಸಂಕುಲ ಸಂಸ್ಥೆ, ನವಚೆತನ ಸಂಸ್ಥೆ, ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಹಾಗೂ ರೆಡ್‍ರಿಬ್ಬನ್‍ಕ್ಲಬ್ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ವರ್ಷದ ಘೋಷಣೆಯಂತೆ ಸಮುದಾಯಗಳು ಮುನ್ನಡೆಸಲಿ ಎಂಬ ನುಡಿಯಂತೆ ಸಮುದಾಯ ಜಾಗೃತವಾಗಿ ಮುಂದಾಳತ್ವ ವಹಿಸಿ ಜಾಗೃತಿಯನ್ನು ಮೂಡಿಸಿ ಏಡ್ಸ್‍ರೋಗ ಹರಡುತ್ತಿರುವ ಪ್ರಮಾಣವನ್ನು ಸೊನ್ನೆಗೆ ತಂದಾಗ ಮಾತ್ರ ಈ ದಿನಾಚರಣೆಯ ಉದ್ದೇಶ ಪೂರ್ಣಗೊಳ್ಳುವುದು ಎಂದು ತಿಳಿಸಿದರು. ಹೆಚ್ಚು ಹೆಚ್ಚು ತಪಾಸಣೆ ಮಾಡಿ ಸೋಂಕಿತರಿಗೆ ಸೌಲಭ್ಯ ನೀಡಬೇಕು. ಸ್ವ ಉದ್ಯೋಗ ಹೊಂದಿ ಆರ್ಥಿಕ ಸಬಲರನ್ನಾಗಿ ಮಾಡಬೇಕೆಂದು ಎಸ್.ವಿ.ಸಂಕನೂರ ನುಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಮಾತನಾಡಿ ಹೆಚ್‍ಐವಿ ಏಡ್ಸ್ ನಿಯಂತ್ರಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದ್ದು, ಯುವಕರು ಕಾಲೇಜ ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ತಿಳುವಳಿಕೆ ಮೂಡಿಸಿ, ಹೆಚ್‍ಐವಿ ಮುಕ್ತ ಸಮಾಜ ನಿರ್ಮಾಣ ಮಾಡಲು ಕೈ ಜೋಡಿಸಬೇಕು. ಸಮಾಜದಲ್ಲಿ ಹೆಚ್‍ಐವಿ ಸೋಂಕಿತರಿಗೆ ಮತ್ತು ಬಾಧಿತರರಿಗೆ ಆಗುವ ಅಸಮಾನತೆಯನ್ನು ತೊಲಗಿಸಲು ಮುಂದಾಗಬೇಕು. ನೊಂದವರಿಗೆ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ ಖೋನಾ, ಡಾ. ಮಹ್ಮದ್ ಅಶ್ರಫ್ ಉಲ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.