ವಿಶ್ವ ಕ್ಯಾನ್ಸರ ಜಾಗೃತಿ ದಿನಾಚರಣೆ ಜಾಥಾ

ಧಾರವಾಡ, ಫೆ.6: ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ, ಧಾರವಾಡ ವತಿಯಿಂದ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ (ಎನ್.ಪಿ-ಎನ್.ಸಿ.ಡಿ) ದಡಿಯಲ್ಲಿ ವಿಶ್ವ ಕ್ಯಾನ್ಸರ ಜಾಗೃತಿ ದಿನಾಚರಣೆ 2024 ಅಂಗವಾಗಿ ಜಿಲ್ಲಾ ಪಂಚಾಯತ ಕಛೇರಿಯಿಂದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಮುಖ್ಯಯೋಜನಾಧಿಕಾರಿ ದೀಪಕ ಮಡಿವಾಳರ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಅವರು ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಅವರು ಮಾತನಾಡಿ, ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗಿದ್ದು, ಈ ಕಾರ್ಯಕ್ರಮದಡಿ 30 ವರ್ಷ ಮೇಲ್ಪಟ್ಟ ಎಲ್ಲರನ್ನು ಸಾಮಾನ್ಯ ಕ್ಯಾನ್ಸರ (ಬಾಯಿ, ಸ್ತನ ಹಾಗೂ ಗರ್ಭಕೊರಳಿನ ಕ್ಯಾನ್ಸರ) ಗೆ ತಪಾಸಣೆಯನ್ನು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾಡಲಾಗುತ್ತಿದ್ದು, ಹಾಗೂ ಕ್ಯಾನ್ಸರ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚುವುದರಿಂದ ಹಾಗೂ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗುವ ಪ್ರತಿಶತವು ಹೆಚ್ಚುತ್ತದೆ ಹಾಗೂ ಕ್ಯಾನ್ಸರ ರೋಗದ ತಡೆಗಟ್ಟುವ ಮತ್ತು ಗಂಡಾಂತರ ಲಕ್ಷಣಗಳ ಕುರಿತು ತಿಳಿಸಿದರು.

30 ವರ್ಷ ಮೇಲ್ಪಟ್ಟ ಸಾರ್ವಜನಿಕರು ವರ್ಷಕ್ಕೆ ಒಂದು ಬಾರಿಯಾದರು ತಪಾಸಣೆ ಒಳಪಡಬೇಕು ಮತ್ತು ಎನ್.ಸಿ.ಡಿ ಕ್ಲಿನಿಕ್‍ನಲ್ಲಿ ಲಭ್ಯವಿರುವ ಸೇವೆಗಳ ಕುರಿತು ವಿವರಿಸಿದರು ಹಾಗೂ ಸಾರ್ವಜನಿಕರು ಈ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಜಾಗೃತಿ ಜಾಥಾ ಕಾರ್ಯಕ್ರಮವು ಜಿಲ್ಲಾ ಪಂಚಾಯತ ಕಛೇರಿಯಿಂದ ಪ್ರಾರಂಭಗೊಂಡು ಕೋರ್ಟ ಸರ್ಕಲ್ ಮಾರ್ಗವಾಗಿ ಜುಬಲಿ ಸರ್ಕಲ್ ಮುಖೇನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಅಂತ್ಯಗೊಂಡಿತು. ಜಾಥಾ ನಡೆಯುದ್ದಕ್ಕೂ ಕ್ಯಾನ್ಸರ್ ಕುರಿತು ಷೋಷಣೆಗಳ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಹಾಗೂ ದೃಷ್ಠೀ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸಿದರು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪರಶುರಾಮ ಎಫ್.ಕೆ., ಮತ್ತು ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಆಶಾ ಸಿಬ್ಬಂದಿಯವರು, ಎನ್.ಸಿ.ಡಿ ಕಾರ್ಯಕ್ರಮದ ಸಿಬ್ಬಂದಿಯವರು ಹಾಗೂ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ದೃಷ್ಠೀ ಪ್ಯಾರಾ ಮೆಡಿಕಲ್ ಕಾಲೇಜಿನ ಅಧ್ಯಕ್ಷರು, ಪ್ರಾಂಶುಪಾಲರು, ಸಿಬ್ಬಂದಿಯವರು, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.