ವಿಶ್ವ ಜಲ ದಿನಾಚರಣೆ ಕುರಿತು ಕಾನೂನು ಅರಿವು ಮತ್ತು ನೆರವು

ಬೀದರ: ಮಾ. 28: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ಅಷ್ಟೂರನ ಮಹಾದೇವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು.
ವಿಶ್ವ ಜಲ ದಿನಾಚರಣೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್.ಕೆ. ಕನಕಟ್ಟೆ ಅವರು ಸಸಿಗೆ ನೀರು ಎರೆವುದರ ಮೂಲಕ ಉದ್ಛಾಟಿಸಿ ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸವಲತ್ತುಗಳ ಬಗ್ಗೆ ಮಾತನಾಡಿದರು.
ಉಪನ್ಯಾಸಕರಾಗಿ ಶ್ರೀಯುತ ಬಿ.ಎಸ್. ಪಾಟೀಲ, ಹಿರಿಯ ವಕೀಲರು ಬೀದರ, ರವರು ನೀರಿನ ಬಳಕೆ ಮತ್ತು ನೀರಿನ ಉಳಿಕೆ ಬಗ್ಗೆ ತಿಳಿಸಿದ್ದರು.
ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗೌತಮ ಅರಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಸವರಾಜ ಸ್ವಾಮಿ ನಿರುಪಣೆ ಮಾಡಿದರು. ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರರಾದ ಬಸವರಾಜ ಪಾಟೀಲ, ಅಷ್ಟೂರ ಪಂಚಾಯತ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಪಾಟೀಲ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಆಕಾಶ ಸಜ್ಜನ, ಅಷ್ಟೂರ ಗ್ರಾಮದ ಗ್ರಾಮಸ್ತರು, ಪಂಚಾಯತ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.