ವಿಶ್ವ ತಂಬಾಕು ರಹಿತ ದಿನಾಚರಣೆ, ಹಲವೆಡೆ ಜಾಗೃತಿ

ನಗರದ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು. ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ನಾಗೇಂದ್ರ ಇದ್ದಾರೆ.

ಬೆಂಗಳೂರು, ಮೇ ೩೧- ಇಂದು ಜಗತ್ತಿದ್ಯಾಂತ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದೆ. ತಂಬಾಕು ಸೇವನೆಯಿಂದಾಗಿ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುವುದನ್ನು ತಪ್ಪಿಸಲು ಪ್ರತಿವರ್ಷ ತಂಬಾಕು ವಿರೋಧಿ ದಿನವನ್ನು ಆಚರಿಸಿಕೊಂಡು ಬರಲಿದೆ. ತಂಬಾಕು ಸೇವನೆಯ ಹಾನಿಕಾರಿಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ತಂಬಾಕುಸೇವನೆಯನ್ನು ಕಡಿಮೆ ಮಾಡಿ, ಪರಿಣಾಮಕಾರಿ ನೀತಿಗಳನ್ನು ಪ್ರತಿಪಾದಿಸಲು ವಿಶ್ವ ಆರೋಗ್ಯ ಸಂಸ್ಥೆ ನೇತೃತ್ವದಲ್ಲಿ ಜಗತ್ತಿದಾದ್ಯಂತ ತಂಬಾಕು ರಹಿತ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ತಡೆಗಟ್ಟುವ ಕ್ರಮದ ಬಗ್ಗೆ ಜಾಗತಿಕ ಮಟ್ಟದಲ್ಲಿ ಗಮನಸೆಳೆಯಲು ೧೯೮೭ರಲ್ಲಿ ಡಬ್ಲ್ಯುಎಚ್‌ಒ ಸದಸ್ಯ ರಾಷ್ಟ್ರಗಳಿಂದ ತಂಬಾಕು ರಹಿತ ದಿನವನ್ನು ಮೊದಲ ಬಾರಿಗೆ ಆಚರಿಸಲಾಗಿತ್ತು.ಈ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು.
ಸಿಗರೇಟ್ ಮಾದರಿಯ ಪ್ರತಿಕೃತಿಯನ್ನು ಸ್ಥಾಪಿಸಿ ತಂಬಾಕಿನ ಬಗ್ಗೆ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲಾಗಿತ್ತು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ನಾಗೇಂದ್ರ, ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.ಇದೇ ವೇಳೆ ಸಚಿವ ದಿನೇಶ್‌ಗುಂಡೂರಾವ್ ನಗರದ ವಿವಿಧ ಭಾಗಗಳಲ್ಲಿ ಸೈಕಲ್ ಜಾಥಾ ನಡೆಸಿ ತಂಬಾಕು ತ್ಯೇಜಿಸುವಂತೆ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ತಂಬಾಕು ಆರೋಗ್ಯಕ್ಕೆ ಹಾನಿಕಾರವಾಗಿದ್ದು, ಅದನ್ನು ತ್ಯಜಿಸುವಂತೆ ಮುಖಕ್ಕೆ ದ್ವೇವಗಳ ಮುಖವಾಡ ಹಾಕಿಕೊಂಡು ಜಾಗೃತಿ ಮೂಡಿಸಲಾಯಿತು.