ವಿಶ್ವ ಪರಿಸರ ದಿನಾಚರಣೆ ಅಂಗವಾಗಿಹೈಕೋರ್ಟ್ ಪೀಠದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ,ಜೂ.5:ಕರ್ನಾಟಕ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ಪೀಠ, ಗುಲಬರ್ಗಾ ನ್ಯಾಯವಾದಿಗಳ ಸಂಘ, ಆರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದ ಆವರಣದಲ್ಲಿ ಸೋಮವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ಎಮ್.ಶ್ಯಾಮ್‍ಪ್ರಸಾದ್ ಹಾಗೂ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್, ಎನ್.ಎಸ್. ಸಂಜಯ್ ಗೌಡ, ಆರ್. ನಟರಾಜ್, ಹೇಮಂತ ಚಂದನಗೌಡರ ಮತ್ತು ಉಮೇಶ್ ಎಂ. ಅಡಿಗ ಸೇರಿದಂತೆ ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು ಕಲಬುರಗಿ ಪೀಠದ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿದ್ದಾರೆ.