ವಿಶ್ವ ಪರಿಸರ ದಿನಾಚರಣೆ


ಸಂಜೆವಾಣಿವಾರ್ತೆ
 ಹರಪನಹಳ್ಳಿ, ಜೂ.06: ತಾಲೂಕಿನ ನೀಲಗುಂದ ಗ್ರಾಪಂ  ವ್ಯಾಪ್ತಿಯ ಮಾಚಿಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಪಂನ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ್‌ ವೈ.ಎಚ್. ಅವರ ಉಪಸ್ಥಿತಿಯಲ್ಲಿ ಸಸಿಗಳನ್ನು ನೆಡಲಾಯಿತು.
 ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಯು.ಎಚ್.ಸೋಮಶೇಖರ್, ಪಂಚಾಯತ್‌ ರಾಜ್‌ ಸಹಾಯಕ ನಿರ್ದೇಶಕ ವೀರಣ್ಣ ಲಕ್ಕಣ್ಣನವರ್, ಶಾಲೆಯ ಪ್ರಾಚಾರ್ಯರು, ಶಿಕ್ಷಕರು, ಗ್ರಾಪಂ ಸಿಬ್ಬಂದಿ , ವಿದ್ಯಾರ್ಥಿಗಳು ಹಾಜರಿದ್ದರು.