ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸೆ. 27 ರಂದು ಹೊಳಕುಂದಾ ಗ್ರಾಮದಲ್ಲಿ “ಸ್ವಚ್ಛತಾ ಪಾಕ್ವಾಡಾ ಕಾರ್ಯಕ್ರಮ”

ಕಲಬುರಗಿ,ಸೆ.26:ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ ಕಲಬುರಗಿ, ತಹಶೀಲ್ದಾರರು ಕಮಲಾಪೂರ ಹಾಗೂ ಇನ್‍ಟ್ಯಾಕ್ ಕಲಬುರಗಿ ಇವುಗಳ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2021 ಅಂಗವಾಗಿ (ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ ಸಂದೇಶದಡಿ) ಕಮಲಾಪೂರ ತಾಲೂಕಿನ ಹೊಳಕುಂದಾ ಗ್ರಾಮದಲ್ಲಿರುವ ಪುರಾತನ ಸ್ಮಾರಕಗಳ ಬಳಿ ಸೆಪ್ಟೆಂಬರ್ 27 ರಂದು ಸೋಮವಾರ ಬೆಳಿಗ್ಗೆ 10.30 ಗಂಟೆಗೆ “ಸ್ವಚ್ಛತಾ ಪಕ್ವಾಡಾ ಕಾರ್ಯಕ್ರಮ” ವನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಪ್ರವಾಸೋದ್ಯಮ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವರಾದ ಆನಂದಸಿಂಗ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ ಆರ್.ನಿರಾಣಿ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

  ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಕನೀಜ್ ಫಾತೀಮಾ, ಸುಭಾಷ ಆರ್. ಗುತ್ತೇದಾರ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಬಿ. ಪಾಟೀಲ (ಚಂದು ಬಿ. ಪಾಟೀಲ), ಕಲಬುರಗಿ ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗು. ಗುಗಳೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ದಯಾಘನ್ ಧಾರವಾಡಕರ್, ಹೊಳಕುಂದಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಭೀಮಬಾಯಿ ಹಣಮಂತ, ಉಪಾಧ್ಯಕ್ಷ ಶಾಂತವೀರ ಸೂರ್ಯಕಾಂತ,  ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ ಅತುಲ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು.