ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಯಶಸ್ವಿಯಾಗಿ ನಡೆಸಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ, ಜೂ.9: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜೂನ್ 12 ರಂದು ಜಿಲ್ಲಾಡಳಿತ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸುತ್ತಿದ್ದು, ಎಲ್ಲರೂ ಸೇರಿಕೊಂಡು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿಗಳ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ 8, 9 ಮತ್ತು 10ನೇ ತರಗತಿಯ ಮಕ್ಕಳಿಗೆ ಮಾತ್ರ ಕಡ್ಡಾಯವಾಗಿ ಸರ್ಕಾರಿ ಅಥವಾ ಖಾಸಗಿ ಶಾಲಾ ಮಕ್ಕಳು ಜಾಥಾದಲ್ಲಿ ಭಾಗವಹಿಸುವ ಸಲುವಾಗಿ ಜೂನ್ 12 ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಶಾಲಾ ಮಕ್ಕಳನ್ನು ಕರೆತರುವುದು ಮತ್ತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ಶಾಲೆಗಳಿಗೆ ಸುತ್ತೋಲೆ ಹೋರಡಿಸುವಂತೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.

ಕಾಲನಡಿಗೆ ಜಾಥಾ ಕಾರ್ಯಕ್ರಮವು ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತ, ಕೆ.ಎಂ. ಕರಿಯಪ್ಪ ವೃತ್ತದ ಮಾರ್ಗವಾಗಿ ರಂಗ ಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಬಾಗವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಕಾಂರ್ಇಕ ನಿರಿಕ್ಷಕರಾದ ಕೆ. ಸುವರ್ಣ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕರಾದ ಅರ್ಜುನ ಸಿತಾಳಗೇರಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.