ವಿಶ್ವ ಮಹಿಳಾ ದಿನ

ಧಾರವಾಡ, ಮಾ15: ಮಹಿಳೆಯು ಪುರುಷನಿಗೆ ಸರಿಸಮಾನವಾದ ಜವಾಬ್ದಾರಿಯನ್ನು ನಿಭಾಯಿಸುವಷ್ಟು ಸಮರ್ಥಳಾಗಿದ್ದಾಳೆ ಎಂದು ಡಾ. ರಂಜನಾ ಮೈಯ್ಯಾ ಹೇಳಿದರು.
ಪಟ್ಟಣದ ಕೆ ಎಲ್ ಎಸ್ ವಿ ಡಿ ಐ ಟಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ. ವಿ ಎ ಕುಲಕರ್ಣಿ ಮಹಿಳೆಯು ಕೌಟುಂಬಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಯಶಸ್ಸು ಕಾಣುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.