ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ

ಧಾರವಾಡ,ಅ.17: ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಮತ್ತು ಡಿಮ್ಹಾನ್ಸ್ ಆಸ್ಪತ್ರೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಇತ್ತಿಚಿಗೆ ಆಯೋಜಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಎಲ್ಲ ಆರೋಗ್ಯಗಳಲ್ಲಿ ಮಾನಸಿಕ ಆರೋಗ್ಯ ಅತ್ಯಂತ ಮಹತ್ವದ್ದಾಗಿದ್ದು. ಈಗಿನ ಒತ್ತಡದ ಜೀವನದಲ್ಲಿ ಮಾನಸಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಉಂಟಾಗುವುದು, ಮಾನಸಿಕ ಆರೋಗ್ಯದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಾವುದೇ ಮಾನಸಿಕ ಸಮಸ್ಯೆಗಳಿಗೆ ಪರಿಹಾರಿ ಕಂಡುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಎ. ಮರಿಗೌಡ ಅವರು ಮಾತನಾಡಿ, ಸಂಸ್ಥೆಯ ಬಂದಿಗಳು ಕಾರಾಗೃಹದ ಅವಧಿಯಲ್ಲಿ ಮಾನಸಿಕ ಉದ್ವೇಗಕ್ಕೆ ಒಳಗಾಗುವುದು ಸಾಮಾನ್ಯ. ಕಾರಣ ಅವರಿಗೆ ಮಾನಸಿಕ ತರಬೇತಿ ಮುಖಾಂತರ ಮಾನಸಿಕವಾಗಿ ಸಶಕ್ತರನ್ನಾಗಿ ಮಾಡುವುದು ಕಾರ್ಯಕ್ರಮದ ಸದುದ್ಧೇಶವಾಗಿದ್ದು, ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಡಾ| ಮೇಘಮಾಲಾ, ಡಾ. ಗಾಯತ್ರಿ ಶಿಂಧೆ, ಡಾ. ಲೈಲಾ ಮ್ಯಾಥ್ಯೂ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಹಾಯಕ ಅಧೀಕ್ಷಕ ಶಹಾಬುದ್ದೀನ ಕೆ., ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿಯವರು ಉಪಸ್ಥಿತದ್ದರು.
ಸುನಂದಾ ಹುಬ್ಬಳ್ಳಿ ಪಾರ್ಥಿಸಿದರು, ಸಂಸ್ಥೆಯ ಸಹಾಯಕ ಅಧೀಕ್ಷಕ ಶಹಾಬುದ್ದೀನ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷರಾದ ಪಿ.ಬಿ. ಕುರಬೆಟ್ಟ ವಂದಿಸಿದರು.