ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂ. 14ರಂದು ರಕ್ತದಾನ ಶಿಬಿರ

ಕಲಬುರಗಿ,ಜೂ.10:ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಇದೇ ಜೂನ್ 14ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಪದವಿ ಕಾಲೇಜುಗಳ ಯುವ ರೆಡ್‍ಕ್ರಾಸ್ ವಿದ್ಯಾರ್ಥಿಗಳು ಭಾಗವಹಿಸಿ ರಕ್ತದಾನ ಮಾಡಬಹುದಾಗಿದೆ. ಇದಲ್ಲದೇ, ಸಾರ್ವಜನಿಕರು ಮತ್ತು ಸರ್ಕಾರಿ ನೌಕರರು ಭಾಗವಹಿಸಿ ರಕ್ತದಾನ ಮಾಡಬಹುದಾಗಿದೆ. ಕಲಬುರಗಿ ಜಿಲ್ಲೆಯ ಪ್ರತಿ ಪದವಿ ಕಾಲೇಜಿನಿಂದ ಕನಿಷ್ಠ ಐವರು ರಕ್ತದಾನಿಗಳು ವೈ.ಆರ್.ಸಿ. ಕಾರ್ಯಕ್ರಮ ಅಧಿಕಾರಿಗಳೊಂದಿಗೆ ಕಳುಹಿಸಬೇಕು. ರಕ್ತದಾನಿಗಳ ಪಟ್ಟಿಯನ್ನು ಮುಂಚಿತವಾಗಿ ಕಲಬುರಗಿ ರೆಡ್‍ಕ್ರಾಸ್ ಸಂಸ್ಥೆಯ ಕಚೇರಿಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ರಕ್ತದಾನ ಮಾಡಬಯಸುವ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ತಮ್ಮ ಹೆಸರುಗÀಳನ್ನು ಮೊಬೈಲ್ ಸಂಖ್ಯೆ 9620646208, 8308307554 ಗಳಿಗೆ ಸಂಪರ್ಕಿಸಿ ನೋಂದಾಯಿಸಿಕೊಳ್ಳಬೇಕು.

ಕೋವಿಡ್-19 ಹಿನ್ನೆಲೆಯಲ್ಲಿ ರಕ್ತದಾನಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.