ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

ಶಿವಮೊಗ್ಗ, ಮೇ 30;ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ ತೀರ್ಥಹಳ್ಳಿ ತಾಲ್ಲೂಕಿನ ಹೆಗಲತ್ತಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕ-1, ಘಟಕ-2 ರ ವಿಶೇಷ ವಾರ್ಷಿಕ ಶಿಬಿರದಲ್ಲಿ ) ವಿಶ್ವ ಸ್ಕಿಜೋಪ್ರೇನಿಯಾ ದಿನಾಚರಣೆಯನ್ನು ಆಚರಿಸಲಾಯಿತು.
ಘೋಷವಾಕ್ಯ “ಸಮಾಜದ ದಯಾಳುತನದ ಶಕ್ತಿಯ ಆಚರಣೆ”(ಸೆಲಿಬ್ರೇಟಿಂಗ್ ದಿ ಪವರ್ ಆಫ್ ಕಮ್ಯುನಿಟಿ ಕೈಂಡ್‍ನೆಸ್) ಎಂಬ ಘೋಷವಾಕ್ಯದಡಿ ಈ ವರ್ಷ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಶಮಾ, ಮನೋವೈಧ್ಯರು ಡಾ. ಸಂತೋμï.ಎಂ.ಎನ್, ಸಹ್ಯಾದ್ರಿ ಕಾಲೇಜಿನ ಬಿಎಸ್‍ಡಬ್ಲ್ಯೂ ಪ್ರಾಧ್ಯಾಪಕರಾದ ರವಿ.ಎಂ.ಡಿ, ಸಹ್ಯಾದ್ರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಕಾಶ್ ಮರಗನಹಳ್ಳಿ, ಮನೋಸಾಮಾಜಿಕ ಕಾರ್ಯಕರ್ತ ಶ್ರೀಧರ್.ಎನ್, ಸಹ್ಯಾದ್ರಿ ಕಾಲೇಜಿನ ಸಹಪ್ರಾಧ್ಯಾಪಕರಾದ ಲವ.ಜಿ.ಆರ್  ಮತ್ತಿತರರು ಉಪಸ್ಥಿತರಿದ್ದರು.