ವಿಷಪೂರಿತ ಮದ್ಯ ಸೇವಿಸಿ ೧೦ ಮಂದಿ ಸಾವು

ಮೊರೆನಾ (ಮಧ್ಯಪ್ರದೇಶ),ಜ.೧೨-ವಿಷಕಾರಿ ಮದ್ಯ ಸೇವಿಸಿ ಹತ್ತು ಮಂದಿ ಮೃತಪಟ್ಟು ೧೨ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಧಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೊರೆನಾ ಜಿಲ್ಲೆಯ ಚೈರಾ ಮಾನ್ಪುರ್ ಗ್ರಾಮ ಹಾಗೂ ಪಹವಾಲಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಅದನ್ನು ಕುಡಿದ ೨೨ ಮಂದಿ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ೮ ಮಂದಿ ಸಾವನ್ನಪ್ಪಿದ್ದಾರೆ.
ಅಲ್ಲದೆ, ಆಸ್ಪತ್ರೆಗೆ ದಾಖಲಾದ ಉಳಿದವರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದು ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಂಭೀರ ಸ್ಥಿತಿಯಲ್ಲಿರುವ ಇಬ್ಬರನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ