ವಿಸಿ ಕ್ರಿಕೆಟ್ ಕಪ್ ಪಂದ್ಯಾವಳಿಗೆ ಕುಲಪತಿ ಅಗಸರ ಚಾಲನೆ

ಕಲಬುರಗಿ:ಏ.03: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿ ಕೊಳ್ಳಬೇಕು ಎಂದು ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟಗಳ ಸಹಯೋಗದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವದ ಅಂಗವಾಗಿ ಆಯೋಜಿಸಿರುವ “ವಿಸಿ ಕಪ್ ಕ್ರಿಕೆಟ್ ಪಂದ್ಯಾವಳಿ” ಯನ್ನು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಾಲೇಜಿನ ದಿನಗಳಲ್ಲಿ ಕಲಿಯುವ ಆಸಕ್ತಿ ಇದ್ದಾರೆ ಸಾಲದು. ಕ್ರೀಡಾ ಚಟುವಟಿಕೆಗಳಲ್ಲಿಯೂ ಹೆಚ್ಚು ಆಸಕ್ತಿ ಬೆಳೆಸಿಕೊಂಡರೆ ಸಾಧನೆಗೆ ಸ್ಫೂರ್ತಿ ಸಿಗಲಿದೆ ಎಂದ ಅವರು ತಮ್ಮ ಕಾಲೇಜಿನ ದಿನಗಳಲ್ಲಿ ನಾನು ಸಹ ಉತ್ತಮ ಪಟುವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರ ನೆನಪುಗಳನ್ನು ಮೆಲುಕು ಹಾಕಿದರು.

ಸ್ನಾತಕೋತ್ತರ ವಿವಿಧ ವಿಭಾಗಗಳ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ವಿಸಿ ಕಪ್ ಟೂರ್ನಮೆಂಟ್ ನಲ್ಲಿ ಭಾಗವಹಿಸಲಿದ್ದಾರೆ. ಸುಮಾರು 10 ದಿನಗಳ ಕಾಲ ಈ ಪಂದ್ಯಾವಳಿ ನಡೆಯಲಿದೆ.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎನ್.ಜಿ.ಕಣ್ಣೂರು, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ, ಡಾ.ಹಣಮಂತ ಜಂಗೆ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಅಧ್ಯಕ್ಷ ರವಿ, ಮಹಾದೇವ ಸ್ವಾಮಿ, ಆನಂದ ಯಾತನೂರ ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಶಿವಶರಣ ಪಾಟೀಲ ಸೇರಿದಂತೆ ವಿವಿಧ ವಿಭಾಗಗಳ ವಿದ್ಯಾರ್ಥಿ ತಂಡಗಳ ಆಟಗಾರರು, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.