ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯದ ಸಿಬ್ಬಂದಿಗೆ ಕೋವಿಡ್ ತಪಾಸಣೆ

ಕಲಬುರಗಿ,ನ.15-ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಯಂತೆ ನ.17 ರಿಂದ ಪದವಿ ಕಾಲೇಜುಗಳು ಪ್ರಾರಂಭಿಸಲು ಕೆಲವು ಕ್ರಮಗಳನ್ನು ಅನುಸರಿಸಿ ಅನುಮತಿ ನೀಡಲಾಗಿರುವ ಹಿನ್ನಲೆಯಲ್ಲಿ ಮಹಾವಿದ್ಯಾಲಯದಲ್ಲಿ ದ್ರವಣ ಸಿಂಪಡಿಸಲು ಕ್ರಮ ಕೈಗೊಳ್ಳಲಾಯಿತು ಹಾಗೂ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಕೋವಿಡ್ (ಆರ್.ಟಿ.ಪಿ.ಸಿ.ಆರ್) ತಪಾಸಣೆಗೆ ಒಳಗಾದರು. ಜೀಮ್ಸ್ ಆಸ್ಪತ್ರೆಯ ಕೋವಿಡ್ ಸಂಚಾರಿ ತಪಾಸಣಾ ತಂಡದವರು ಮಹಾವಿದ್ಯಾಲಯಕ್ಕೆ ಆಗಮಿಸಿ ಎಲ್ಲರ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಂಡರು.