ಬೀದರ್:ಜು.23: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಇಂಡಿಯನ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಜೋಶಿ ಅವರನ್ನು ನಗರದ ಜಾಸ್ಮಿನ್ ಶಿಕ್ಷಣ ಸಂಸ್ಥೆಯಲ್ಲಿ ಸನ್ಮಾನಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಅಜಿಜ್ ಖಾನ್ ಅವರು ಶಾಲು ಹೊದಿಸಿ ಸತ್ಕರಿಸಿದರು.
ಜೋಶಿ ಅವರು ಈಗಾಗಲೇ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿದ್ದಾರೆ. ಇದೀಗ ಅವರಿಗೆ ವಿಶ್ವವಿದ್ಯಾನಿಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯ ಸ್ಥಾನಕ್ಕೂ ನಾಮ ನಿರ್ದೇಶನ ಮಾಡಲಾಗಿದೆ. ಅವರ ಅವಧಿಯಲ್ಲಿ ಉತ್ತಮ ಕೆಲಸ ಮಾಡುವ ವಿಶ್ವಾಸ ಇದೆ ಎಂದರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಉನ್ನತ ಸ್ಥಾನ ಪಡೆಯಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಜಾಸ್ಮಿನ್ ಪದವಿ, ಪದವಿಪೂರ್ವ ಕಾಲೇಜು ಹಾಗೂ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.