ವೀಣಾ ಜಲಾದೆಗೆ ಸಾಹಿತ್ಯ ಸಿಂಧು ಪ್ರಶಸ್ತಿ

ಬೀದರ:ಮಾ.27: ಇಲ್ಲಿಯ ಲೇಖಕಿ ವೀಣಾ ಎಸ್. ಜಲಾದೆ ಅವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಮಟ್ಟದ ಸಾಹಿತ್ಯ ಸಿಂಧು ಪ್ರಶಸ್ತಿ ದೊರೆತಿದೆ.
ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವೀಣಾ ಅವರು ಬೀದರ್‍ನ ಬಸವೇಶ್ವರ ಬಿ.ಎಡ್. ಕಾಲೇಜು ಉಪನ್ಯಾಸಕಿಯಾಗಿದ್ದಾರೆ. ಎರಡು ದಶಕಗಳಿಂದ ಸಾಹಿತ್ತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಲೇಖನ, ಕವನ, ಕಥೆಗಳನ್ನು ರಚಿಸಿದ್ದಾರೆ.
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷ ಮಧುನಾಯಕ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಐ.ಜಯಮ್ಮ, ಸುಪ್ರಿತಾ ಶೀಲವಂತ, ನಾಗೇಶ ಸ್ವಾಮಿ ಮಸ್ಕಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.