ವೀರರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ : ಅಲ್ಲಮಪ್ರಭು ಪಾಟೀಲ

ಕಲಬುರಗಿ,ಸೆ.14: ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದಗಾಂಧೀಜಿಯವರು ಹಾಗೂ ಹಲವಾರು ವೀರರ ಹೋರಾಟದ ಫಲವಾಗಿನಮಗೆ ಸ್ವಾತಂತ್ರ ಸಿಕ್ಕಿದೆ ಎಂದು ಕಲಬರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಹೇಳಿದರು
ಇಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಸರ್ವ ಜನರ ಏಕ ಧ್ವನಿ ಸಮಾನತೆಗಾಗಿಪ್ರಜಾಪ್ರಭುತ್ವ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರು ಮೂಢನಂಬಿಕೆ, ಅಸ್ಪøಶ್ಯತೆಯನ್ನು ಹೋಗಲಾಡಿಸಿದ್ದಾರೆ. ಸಂವಿಧಾನ ರಚನೆ ಮಾಡಿ, ಎಲ್ಲರೂ ಸಮಾನರು ಎಂದು ತಿಳಿಸಿಕೊಟ್ಟಿದ್ದಾರೆ ಎಂದರು.ಇದಕ್ಕೂ ಮುನ್ನ ಎಲ್ಲಾ ಗಣ್ಯ ವ್ಯಕ್ತಿಗಳು ಡಾ.ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ ಶುಭ ಅವರು ಪ್ರಾಸ್ತಾವಿಕವಾಗಿ
ಮಾತನಾಡಿ, ಸಂವಿಧಾನ ಪೀಠಿಕೆ ಪ್ರಜಾಪ್ರಭುತ್ವ ಹೊಸ ಪೀಳಿಗೆಗೆ ಅರ್ಥವಾಗಬೇಕೆಂದರು.ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಾಲೇಜಿನ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಭಾರತ ಸಂವಿಧಾನ ಪ್ರಸ್ತಾವನೆ ಅಧಿಕಾರಿಗಳಿಗೆ ಮಕ್ಕಳಿಗೆ ಓದಿಸಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರೆಪ್ಪ ಗೌಡ ಬಿರಾದಾರ ಸ್ವಾಗತಿಸಿದರು.ವೇದಿಕೆ ಮೇಲೆ ಕಲಬುರಗಿ ಗ್ರಾಮೀಣ ಕ್ಷೇತ್ರದಶಾಸಕ ಬಸವರಾಜ ಮತ್ತಿಮುಡು, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ ಸಿಂಗ್ ಮೀನಾ , ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್, ಪಾಲಿಕೆ ಆಯುಕ್ತ ಪಾಟೀಲ ಭುವನೇಶ್ ದೇವಿದಾಸಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ವಿವಿಧ ಶಾಲಾ ಕಾಲೇಜಿನಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.