
ಗದಗ,ನ.8: ನವೆಂಬರ್ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರದಂದು ವೀರವನಿತೆ ಒನಕೆ ಓಬವ್ವ ಜಯಂತಿ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿ ಕಾರ್ಯಕ್ರಮದಲ್ಲಿ ವೀರವನಿತೆ ಒನಕೆ ಓಬವ್ವ ಇವರ ಸಾಹಸಗಾಥೆಯ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಉಪನ್ಯಾಸಕರನ್ನು ನೇಮಕ ಮಾಡಲಾಗುವುದು. ಸಂಗೀತ ಕಾರ್ಯಕ್ರಮದೊಂದಿಗೆ ಶಿಷ್ಯಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಲಾಗುವುದು. ಒಟ್ಟಾರೆಯಾಗಿ ಓಬವ್ವ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.
ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ , ಬ್ಯಾನರ್ ಅಳವಡಿಕೆ, ಉಪಹಾರದ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ. ಸರ್ವರಿಗೂ ಸ್ವಾಗತಿಸಿ ವಂದಿಸಿದರು.
ಸಭೆಯಲ್ಲಿ ಎಸ್.ಎನ್.ಬಳ್ಳಾರಿ, ಪೆÇ್ರ.ಕೆ.ಎಚ್.ಬೇಲೂರು, ಆನಂದ ಶಿಂಗಾಡಿ, ಶರೀಫ್ ಬಿಳಿಎಲಿ, ಎಸ್.ಎನ್.ಲಿಂಗಧಾಳ, ಸಿ.ಬಿ.ಕಾಳೆ, ಮಹಾಂತೇಶ ಮದ್ನೂರ, ರಮೇಶ ಕೊಳೂರು, ಬಸವರಾಜ ಬಿಳೆಎಲಿ, ಪ್ರಕಾಶ ವಿ.ಬಿ., ವಾಸಂತಿ ಮಲ್ಲಾಪೂರ ಸೇರಿದಂತೆ ವಿವಿಧ ಸಮುದಾಯದ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.