ವೀರಶೈವ ಮಹಾಸಭಾದಿಂದ ನೂತನ ಡಿಸಿಗೆ ಸ್ವಾಗತ

ದಾವಣಗೆರೆ.ಜು.೧೭: ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್, ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂದೀಪ್ ಅಣಬೇರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಬಿ.ಜೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಹಳ್ಳಿ, ನಗರ ಘಟಕದ ಅಧ್ಯಕ್ಷೆ ಪುಷ್ಪಾ ವಾಲಿ, ಮುಖಂಡರಾದ ಕೊರಟಕೆರೆ ಶಿವಕುಮಾರ್, ಟಿಂಕರ್ ಮಂಜಣ್ಣ, ಅಜಿತ್ ಆಲೂರು, ಶಿವನಗೌಡ, ಶೋಭಾ ಕೊಟ್ರೇಶ್, ದ್ರಾಕ್ಷಾಯಣಿ, ಸೌಮ್ಯ ಸತೀಶ್ ಹಾಗೂ ಇತರರು ಉಪಸ್ಥಿತರಿದ್ದರು