
ಬಳ್ಳಾರಿ, ಮಾ.31: ನಗರದ ಕೊಟ್ಟೂರುಸ್ವಾಮಿ ಕಲ್ಯಾಣ ಮಂಟಪದಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ಸಭೆ ಇಂದು ನಡೆಯಿತು.
ಜಿಲ್ಲಾ ಅಧ್ಯಕ್ಷ ಚಾನಾಳ್ ಶೇಖರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಆಯ್ಕೆಯಾದ 20 ಪುರುಷ, 10 ಮಹಿಳಾ ಕಾರ್ಯಕಾರಿ ಸಮಿತಿ ಸದಸ್ಯರಲ್ಲಿ ಕೆಲವರನ್ನು ತೆಗೆದುಕೊಂಡು, ಮಹಾದಾನಿಗಳನ್ನು ಪರಿಗಣಿಸಿ ಉಪಾಧ್ಯಕ್ಷ, ಕಾರ್ಯದರ್ಶಿ ಸಹ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ 9 ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಸಭೆಯಲ್ಲಿ ಸಮುದಾಯದ ಮುಖಂಡರುಗಳಾದ, ವೀ.ವಿ ಸಂಘದ ಮುಖಂಡರುಗಳಾದ, ವೀ.ವಿ.ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಯಾಳ್ವಿ ಪೊಂಪನಗೌಡ, ದರೂರು ಪುರುಷೋತ್ತಮಗೌಡ ಮೊದಲಾದವರು ಇದ್ದರು.