ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಸಿಎಂಗೆ ಸವದಿ ಮನವಿ

ಬೆಂಗಳೂರು, ನ 16- ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.
ನಗರದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಇಂದು ಮನವಿ ಸಲ್ಲಿಸಿದ್ದಾರೆ.
ಮರಾಠ ಪ್ರಾಧಿಕಾರ ಸ್ಥಾಪಿಸಿ ಅದಕ್ಕೆ ಐವತ್ತು ಕೋಟಿ ರೂ ಬಿಡುಗಡೆ ಮಾಡಿರುವಾಗಲೇ ಸವದಿಯವರು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದಾರೆ.

ಈ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವ ಮೂಲಕ
ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಸಚಿವರಾದ ವಿ. ಸೋಮಣ್ಣ, ಬಿ.ಸಿ. ಪಾಟೀಲ್, ಸೇಡಂ ಶಾಸಕರಾದ ರಾಜಶೇಖರ್ ಪಾಟೀಲ್ ತೆಲ್ಕೂರ್ ಮುಂತಾದವರು ನಿಯೋಗದಲ್ಲಿದ್ದರು.