ವೀರಶೈವ ಲಿಂಗಾಯತ ಸಮಾಜ ಜಾಗೃತವಾಗಿದೆ – ಡಾ. ಶಿವರಾಜ್ ಪಾಟೀಲ್

ವೀರಶೈವ ಲಿಂಗಾಯತ ಪಂಗಡಗಳ ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ರಾಯಚೂರು. ಆ.01-ವೀರಶೈವ ಲಿಂಗಾಯತ ಸಮಾಜ ಹಾಗೂ ಉಪ ಪಂಗಡಗಳನ್ನು ಓಬಿಸಿ ಪಟ್ಟಿ ಸೇರಿಸುವ ವರೆಗೂ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮುಂದುವರಿಸಬೇಕು. ವೀರಶೈವ ಲಿಂಗಾಯತ ಸಮಾಜ ಇಂದು ಬಹಳ ಜಾಗೃತವಾಗಿದೆ.

ಓಬಿಸಿ ಪಟ್ಟಿಗೆ ಸೇರಿಸುವ ವಿಷಯವನ್ನು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಳಿಗೆ ಹಾಗೂ ಸೆಕ್ರೆಟರಿಗಳಿಗೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಅವರು ಹೇಳಿದರು.

ಅವರಿಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ವೀರಶೈವ ಲಿಂಗಾಯತ ಸಮಾಜ ಹಾಗೂ ಅದರ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ನಡೆಸಲಾದ ಬೃಹತ್ ಮೆರವಣಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು ಲಿಂಗಾಯತ ವೀರಶೈವ ಸಮಾಜ ಇಂದಿನ ಪರಿಸ್ಥಿತಿಯಲ್ಲಿ ಬಹಳ ಹಿಂದುಳಿದಿದೆ ಈ ಸಮುದಾಯಗಳ ಶೈಕ್ಷಣಿಕ, ಆರೋಗ್ಯ ,ಉದ್ಯೋಗದಲ್ಲಿ ಮೀಸಲಾತಿ ಒದಗಿಸುವ ಹಾಗೂ ಅಭಿವೃದ್ಧಿಯ ಕಡೆಗೆ ಸಮುದಾಯವನ್ನು ತೆಗೆದುಕೊಂಡು ಹೋಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರ್ಪಡೆಗೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

ಹಿಂದೂ ವೀರಶೈವ ಸಮಾಜ ಹೋರಾಟದ ಹಾದಿಯನ್ನು ಗಮನಿಸಿದಾಗ ಬಹಳ ಜಾಗೃತರದಂತೆ ಕಾಣಿಸುತ್ತದೆ. ಇಲ್ಲಿಗೆ ಈ ಹೋರಾಟ ಕೈ ಬಿಡದೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಹೋರಾಟ ನಡೆಸಿ ನಮ್ಮ ಬೇಡಿಕೆ ಪೂರೈಕೆ ಆಗುವವರೆಗೂ ನಿರಂತರ ಹೋರಾಟವನ್ನು ನಡೆಸಬೇಕಾಗಿದೆ. ಈಗಾಗಲೇ ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಸಮಾಜವನ್ನು ಓಬಿಸಿ ಪೆಟ್ಟಿಗೆ ಸೇರಿಸಲು ಒತ್ತಾಯಿಸಿದರು ಕೂಡ ಕೇಂದ್ರ ಸರ್ಕಾರ ಓಬಿಸಿ ಪಟ್ಟಿಯಲ್ಲಿ ಈ ಸಮಾಜವನ್ನು ಸೇರಿಸದೆ ಇರುವುದು ದುರದೃಷ್ಟಕರ.ನಮ್ಮ ಬೇಡಿಕೆಗಳು ಈಡೇರವರಿಗೂ ಎಲ್ಲರೂ ಸಹಕರಿಸಿ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ನಗರದ ವೀರಶೈವ ಕಲ್ಯಾಣ ಮಂಟಪದಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಒತ್ತಾಯಿಸುವಂತೆ ಅಪರ ಜಿಲ್ಲಾಧಿಕಾರಿ ದುರ್ಗೇಶ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಮಠದ ಮಹಾ ಗುರುಗಳು, 

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್, ಮಹಿಳಾ ಅಧ್ಯಕ್ಷರಾದ ರೇಖಾ, ನಿರ್ಮಲ ಬೆಣ್ಣೆ, ಹರವಿ ನಾಗನಗೌಡ, ರಾಜೇಶ್ವರಿ, ಸೇರಿದಂತೆ ವೀರಶೈವ ಲಿಂಗಾಯತ ಮಹಾಸಭಾದ ಸರ್ವ ಸದಸ್ಯರು ಹಾಗೂ ಉಪ ಪಂಗಡ ಸಮಾಜದ ಸದಸ್ಯರು ಭಾಗವಹಿಸಿದ್ದರು.