ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿ

ಗದಗ,ಅ25 : ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಅವಿರತವಾಗಿ ಹೋರಾಟ ನಡೆಸಿದರು. ಅದಕ್ಕಾಗಿಯೇ ಅವರನ್ನು ವೀರರಾಣಿ ಸ್ವಾತಂತ್ರ್ಯದ ಬೆಳ್ಳಿ ಚುಕ್ಕೆ ಕಿತ್ತೂರು ಚೆನ್ನಮ್ಮ ಎಂದು ಕರೆಯುತ್ತಾರೆ. ಅವರ ಹೋರಾಟ ತ್ಯಾಗ ಬಲಿದಾನವನ್ನು ನಾವೆಲ್ಲಾ ಮರೆಯಬಾರದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ್, ಮಾಜಿ ಶಾಸಕ ಡಿ.ಆರ್. ಪಾಟೀಲ್, ನಗರ ಸಭೆ ಅಧ್ಯಕ್ಷ ಉಷಾ ಮಹೇಶ್ ದಾಸರ್, ಜಿಲ್ಲಾಧಿಕಾರಿ ವೈಶಾಲಿ ಎಂಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪ ವಿಭಾಗಾಧಿಕಾರಿ ವೆಂಕಟೇಶ್ ನಾಯಕ್, ಗಣ್ಯರಾದ ಸಿದ್ದು ಪಲ್ಲೇದ, ಎಮ್ ಎಸ್ ಕರಿಗೌಡ್ರ ಸೇರಿದಂತೆ ಸಮುದಾಯದ ಹಿರಿಯರು ಹಾಜರಿದ್ದರು.