
ಸಂಜೆವಾಣಿ ವಾರ್ತೆ
ಹೊಸಪೇಟೆ(ವಿಜಯನಗರ),ಮೇ.19: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಗವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.
ಮೇ.20 ಹಾಗೂ 21ರಂದು ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.
One attachment • Scanned by Gmail