ವೃತ್ತಿಪರ ಶಿಕ್ಷಣದ ಬಗ್ಗೆ ಕಾರ್ಯಾಗಾರ

ದಾವಣಗೆರೆ.ಜ.೧೩; ತಾಲ್ಲೂಕಿನಕಾಶಿಪುರ ಗ್ರಾಮದಲ್ಲಿ ಶ್ರೀ ಮಂಜುನಾಥ ಮಹಿಳಾ ಸಂಘದಲ್ಲಿ ವೃತ್ತಿಪರ ಶಿಕ್ಷಣದ ಬಗ್ಗೆ ವಿಶೇಷ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಬಸವೇಶ್ವರ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಸಿ ಪಿ ರವರು ವೃತ್ತಿ ಪರ ಶಿಕ್ಷಣದ ಬಗ್ಗೆ ಉಪನ್ಯಾಸವನ್ನು ನೀಡಿದರು.ಈ ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಮತ್ತು ಗ್ರಾಮದ ಮುಖಂಡರು ಹಾಗೂ ನೂರಾರು ಮಹಿಳೆಯರು ಭಾಗವಹಿಸಿದ್ದರು.  ,