ಸೈದಾಪುರ:ಜೂ.15:ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ನಿಮ್ಮ ಬಳಿ ಆಗಮಿಸುವ ಪ್ರತಿಯೊಬ್ಬ ರೋಗಿಯೊಂದಿಗೆ ಪ್ರೀತಿಯಿಂದ ಚಿಕಿತ್ಸೆ ನೀಡಿದರೆ ಅವನ ಖಾಯಿಲೆ ಅರ್ಧ ಗುಣಮುಖವಾಗುತ್ತದೆ. ಆದರಿಂದ ನಿಮ್ಮ ವೃತ್ತಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ನೂತನ ಶಾಸಕ ಶರಣಗೌಡ ಕಂದಕೂರು ತಿಳಿಸಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನೂತನ ಆಂಬ್ಯುಲೆನ್ಸ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಈ ದೆಸೆಯಲ್ಲಿ ಪ್ರತಿಯೊಂದು ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ಸಿದ್ದನಿದ್ದೇನೆ. ಇರುವ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಂಡು ಇಲ್ಲಿನ ಜನಕ್ಕೆ ಉತ್ತಮ ಚಿಕಿತ್ಸೆಯನ್ನು ನೀಡಬೇಕು. ನೀವುಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಒಳ್ಳೆಯದಾಗುತ್ತದೆ. ಸರಕಾರದ ಹಂತದಲ್ಲಿರುವ ಸಮಸ್ಯೆಗಳ ಪಟ್ಟಿಯನ್ನು ಒಂದು ವಾರದೊಳಗೆ ನೀಡಿ. ಮುಂದಿನ ವಿಧಾನ ಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುತೇನೆ. ಇದರೊಂದಿಗೆ ಮತಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ದೊರಕಲು ಪ್ರಮಾಣಿಕ ಪ್ರಯತ್ನ ಮಾಡುತೇನೆ ಎಂದು ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಕ್ಷ್ಮಿಕಾಂತ, ತಾಲೂಕ ಆರೋಗ್ಯ ಅಧಿಕಾರಿ ಡಾ.ಹಣಮಂತ್ರಾಯ, ಯುವ ಮುಖಂಡ ಚಂದ್ರುಗೌಡ, ಬನ್ನಪ್ಪ ಬೆಟ್ಟಪ್ಪನ್ನೋರ್, ರಾಜೇಶ ಉಡಪಿ, ವೆಂಕಟೇಶ ಗಡದ್, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಉಮಾದೇವಿ, ಡಾ. ನಿಖೀಲ್ ಪಾಟೀಲ್, ದಂತ ವೈದ್ಯೆ ಡಾ.ಫೀಮಿಧಾ ಸುಲ್ತಾನ್, ಡಾ.ಅಶ್ವಿನಿ, ಜಮೀರ ಬದ್ದೇಪಲ್ಲಿ, ಮಹಿಪಾಲರೆಡ್ಡಿ ಮುನಗಲ್, ಶಿವಶಂಕರ, ಪಾಗುಂಟಯ್ಯ, ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಇತರರಿದ್ದರು.