ವೃದ್ದಶ್ರಮಕ್ಕೆ ರೂ.೧ ಲಕ್ಷ ದೇಣಿಗೆ ನೀಡುವ ಮೂಲಕ ವಿಶಿಷ್ಠವಾಗಿ ಮದುವೆ ವಾರ್ಷಿಕೋತ್ಸವ ಆಚರಿಸಿದ ದಂಪತಿಗಳು

ಮಂಗಳೂರು, ಜೂ.೩- ಮಂಗಳೂರಿನ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿಯಾಗಿರುವ ಶ್ರೀಮತಿ ಪುಷ್ಪಾವತಿ ಮತ್ತು ಶ್ರೀಯುತ ಶ್ರೀನಿವಾಸ್ ರವರು ತಮ್ಮ ೪೨ನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ವೃದ್ದಶ್ರಮಕ್ಕೆ ದೇಣಿಗೆ ನೀಡುವ ಮೂಲಕ ವಿಶಿಷ್ಠವಾಗಿ ಆಚರಿಸಿದ್ದಾರೆ.

ದಂಪತಿಗಳು ತಮ್ಮ ಮದುವೆಯ ದಿನದ ಸವಿನೆನಪಿಗಾಗಿ ತಮ್ಮ ವೈಯಕ್ತಿಕ ನೆಲೆಯಲ್ಲಿ ಶ್ರೀ ಸಭಾದ ಪುತ್ತೂರಿನ “ಶಿವಸದನ” ವೃದ್ದಶ್ರಮಕ್ಕೆ ರೂ. ೧, ೦೦,೦೦೦.(ಒಂದು ಲಕ್ಷ ) ದೇಣಿಗೆಯನ್ನು ನೀಡಿ ಅರ್ಥ ಪೂರ್ಣವಾಗಿ ಆಚರಿಸಿದ್ದಾರೆ.

ಇವರ ಈ ಕೊಡುಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್ ಉಪಾಧ್ಯಕ್ಷೆ ಸ್ನೇಹ ಲತಾ ದಿವಾಕರ ಇವರು ಸ್ವೀಕರಿಸಿದರು.

ಇದೇ ವೇಳೆ ದಂಪತಿಗಳು ವಿವಾಹ ವಾರ್ಷಿಕೋತ್ಸವ ದಿನವನ್ನು ಹಾರ ಬದಲಾಯಿಸಿ, ರಾಗಿ ಹಾಲುಬಾಯಿ ಕಟ್ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಕೊಡುಗೈ ದಾನಿ ಎಂದೆನಿಸಿಕೊಂಡ ಈ ದಂಪತಿಗಳು ಮಹಿಳಾ ವೇದಿಕೆ ಸದನ, ಸುರತ್ಕಲ್ ಸ್ಥಾನಿಕ ಸಂಘ, ಅವರು ಕಲಿಸಿದ ಸರಕಾರಿ ಚಿತ್ರಾಪುರ ಶಾಲೆಯ ಮಕ್ಕಳಿಗೆ ಹಲವಾರು ವರ್ಷಗಳಿಂದ ಉಚಿತ ನೋಟ್ ಬುಕ್ ಪುಸ್ತಕ ವಿತರಣೆ ಸೇರಿದಂತೆ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಿಗೆ ಹತ್ತು ಹಲವು ರೀತಿಯಲ್ಲಿ ತನುಮನ ಧನ ಸಹಾಯ ನೀಡುತ್ತಾ ಬಂದಿರುತ್ತಾರೆ.

ಇವರ ಈ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ್ ಕುಮಾರ್ ಅವರು, ನಿಮ್ಮ ಸೇವಾ ಮನೋಭಾವಕ್ಕೆ ಶ್ರೀ ಸುಬ್ರಹ್ಮಣ್ಯ ಸಭಾ ಮತ್ತು ಮಹಿಳಾ ವೇದಿಕೆಯ ಅಭಿನಂದನೆಗಳು.

ನಿಮಗೆ ಹಾಗೂ ನಿಮ್ಮ ಮಕ್ಕಳಿಗೆ, ಕುಟುಂಬಕ್ಕೆ ದೇವರು ಆಯುರಾರೋಗ್ಯ ಐಶ್ವರ್ಯ ಯಶಸ್ಸು ನೀಡಲಿ. ಇನ್ನೂ ಹೆಚ್ಚಿನ ಸಹಾಯ ನೀಡುವ ಶಕ್ತಿಯನ್ನು ಸುಬ್ರಹ್ಮಣ್ಯ ದೇವರು ನಿಮಗೆ ಅನುಗ್ರಹಿಸಲಿ. ದಾಂಪತ್ಯ ಜೀವನ ಸುವರ್ಣ ಮಹೋತ್ಸವದತ್ತ ಸಾಗಲಿ ಎಂದು ಹಾರೈಸಿದರು.