ವೇಗವಾಗಿ ಬಂದ ಕಾರು ಹರಿದು ಮೂವರು ದುರ್ಮರಣ

ಮಂಗಳೂರು, ಆ.31- ಅತಿ ವೇಗದಿಂದ ಬಂದ ಕಾರು ಹರಿದು ರಸ್ತೆ ಬದಿ ನಿಂತಿದ್ದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಡ್ಕಾರು ಎಂಬಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ ಹಾಗೂ ಮಾಂತೇಶ್ ಮೃತಪಟ್ಟವರು.
ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರನ್ನು ಚಾಲಕ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ ಹಾಗೂ ಮಾಂತೇಶ್ ಅವರಿಗೆ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದ್ದು ಲಾರಿಯೂ ಜಖಂಗೊಂಡಿದೆ. ಘಟನೆಯ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.