ವೇತನ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು,ಮೇ೧೬:ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಲಾಗಿದ್ದ ೭ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ಇನ್ನು ೬ ತಿಂಗಳವರೆಗೂ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ರಾಜ್ಯಸರ್ಕಾರ ೨೦೨೨ರ ನ. ೧೯ ರಂದು ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗವನ್ನು ರಚಿಸಿ, ೬ ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಲಾಗಿತ್ತು. ೭ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು ಮೇ ೧೯ ರಿಂದ ೬ ತಿಂಗಳವರೆಗೆ ವಿಸ್ತರಿಸಿ ರಾಜ್ಯಪಾಲರ ಹೆಸರಿನಲ್ಲಿ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.