ವೇತನ ಭತ್ಯೆಗಳ ಪರಿಷ್ಕರಣೆ, ಹಳೆ ಪಿಂಚಣಿ ಜಾರಿಗೆ ಆಗ್ರಹಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಮಾ.1ರಿಂದ ಮುಷ್ಕರ: ಪಾಟೀಲ

ಆಳಂದ:ಫೆ.25: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ನೀಡಿದ ಸೂಚನೆಯಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸದೇ ಹೋದಲ್ಲಿ ಮಾರ್ಚ್? 1ರಿಂದ ಎಲ್ಲ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಮ ಅವರು ಎಚ್ಚರಿಸಿದರು.

ಪಟ್ಟಣದ ಸರ್ಕಾರಿ ನೌಕರ ಸಂಘದ ಕಚೇರಿಯಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಒಂದು ವೇಳೆ ಬೇಡಿಕೆಗಳಿಗೆ ನಿರ್ಲಕ್ಷಿಸಿದಲ್ಲಿ ಮಾರ್ಚ್? 1ರಿಂದ ಸರ್ಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳಿಗೆ ಗೈರು ಹಾಜರಾಗುವರು ಹಾಗೂ ತಮ್ಮ, ತಮ್ಮ ಕಚೇರಿಗಳಿಗೆ ಬೀಗ ಜಡಿಯಲಾಗುವುದು. ಈ ಕುರಿತು ನೋಟಿಸ್ ಮೂಲಕ ರಾಜ್ಯ ಸಂಘದಿಂದ ಮನವಿ ಮಾಡಲಾಗಿದೆ. ಸೇವಾ ನಿಯಮಗಳು ಉಲ್ಲಂಘನೆಯಾದರೂ ಸಹ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದ್ದರಿಂದ ಇಂತಹ ಉಗ್ರ ಹೋರಾಟದ ನಿರ್ಧಾರವನ್ನು ಕಳೆದ ಫೆಬ್ರವರಿ 21ರಂದು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ರಾಜ್ಯ ಸಮಿತಿಯು ಸರ್ವಾನುಮತದ ನಿರ್ಣಯ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್?ನಲ್ಲಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಯಾವುದೇ ಪ್ರಸ್ತಾಪ ಮಾಡದೇ ಇರುವುದು ನಿರಾಶೆ ತಂದಿದೆ. ನೌಕರರಿಗೆ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ಕಳೆದ 2022ರ ಜುಲೈ 1ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ವಿಸ್ತøತ ವರದಿಯನ್ನು ಸಲ್ಲಿಸಿತ್ತು. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರವು ನೌಕರರ ವೇತನ ಪರಿಷ್ಕರಣೆ ಮಾಡದೇ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಅವರು ದೂರಿದರು. 2022ರ ಜುಲೈ 1ಕ್ಕೆ ಪೂರ್ವಾನ್ವಯವಾಗುವಂತೆ ಪರಿಷ್ಕøತ ವೇತನ ಹಾಗೂ ಭತ್ಯೆಗಳನ್ನು ಕೊಡಲು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು ಹಾಗೂ ಮೊದಲು ಶೇಕಡಾ 40 ಪಸರ್ಂಟೇಜ್ ಫಿಟ್?ಮೆಂಟ್ ಸೌಲಭ್ಯವನ್ನು ಜಾರಿಗೆ ತರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.

ಈಗಾಗಲೇ ಪಂಜಾಬ್, ರಾಜಸ್ತಾನ್, ಚತ್ತೀಸ್ ಘಡ್, ಜಾಖರ್ಂಡ್, ಹಿಮಾಚಲಪ್ರದೇಶ್ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಜಾರಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿನಾಥ ಖಜೂರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಶೈಲಜಾ ಪೋಮಾಜಿ ಮಾತನಾಡಿದರು. ನೌಕರ ಸಂಘದ ಕಾರ್ಯದರ್ಶಿ ಲೋಕಪ್ಪಾ ಜಾಧವ, ಉಮೇಶ ಮಡಿವಾಳ, ಮಲ್ಲಿಕಾರ್ಜುನ ಕುಮಸಿ, ವಸಂತ ಫುಲಾರೆ, ಮಹಾದೇವ ಗುಣಕಿ, ಸÀತೀಶ ಷಣ್ಮೂಖ, ಮಹಾದೇವ ಗುಣಕಿ, ವಿಶ್ವನಾಥ ಘೋಡಕೆ ಮತ್ತಿತರ ನೌಕರರು ಉಪಸ್ಥಿತರಿದ್ದರು.