ವೈಜ್ಞಾನಿಕವಾಗಿ ಪರಿಹಾರ ನೀಡಿ : ಬುಳ್ಳಾ

ಕಾಳಗಿ.ಸೆ.11: ತಾಲೂಕಿನ ನಾವದಗಿ ಗ್ರಾಮದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿಯಾಗಿದೆ. ಜೊತೆಗೆ ಮನೆಗಳು ಬಿದ್ದು ಜನರ ಜೀವನ ಅಸ್ತವ್ಯಸ್ತವಾಗಿದೆ. ಆದ್ದರಿಂದ ಸರಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಗ್ರಾಮ ಪಂಚಾಯತ ಸದಸ್ಯರಾದ ವಿನಾಯಕ ಬುಳ್ಳಾ ಸರಕಾರಕ್ಕೆ ಮನವಿ ಮಾಡಿದರು.

ನಾವದಗಿ ಗ್ರಾಮದಲ್ಲಿ ಕಾಲುವೆ ಒಡೆದು ಜಮೀನುಗಳಿಗೆ ನೀರು ನುಗ್ಗಿ ಸುಮಾರು10 ಎಕರೆ ಪ್ರದೇಶದಲ್ಲಿನ ಬೆಳೆ ಹಾಳಾಗಿದೆ. ಕಾಲುವೆ ಅಕ್ಕಪಕ್ಕದ ಜಮೀನಿನ ರೈತರ ಹೊಲಗಳಲ್ಲಿ ನೀರು ನುಗ್ಗಿ ಅಪಾರವಾದ ಬೆಳೆ ನಷ್ಟವಾಗಿದೆ.

ಇತ್ತೀಚೆಗೆ ಸುರಿದ ಮಹಾ ಮಳೆಯ ಹೊಡೆತಕ್ಕೆ ದುಡಿಮೆ ಇಲ್ಲದೆ ಮನೆಯನ್ನು ಕಳೆದುಕೊಂಡವರು ಒದ್ದಾಡುತ್ತಿದ್ದಾರೆ.

ಮಳೆಯಿಂದ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು. ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು.

ಮಳೆಯಿಂದ ರೈತರು ಮತ್ತು ನಾಗರಿಕರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ತಾಲೂಕು ಆಡಳಿತ ಮಳೆ ಹಾನಿಯ ಸಮೀಕ್ಷೆ ನಡೆಸಿ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.