ವೈಟ್ ಅಕಾಡೆಮೆ-ಪದವಿ ಪ್ರದಾನ ಆಯೋಜನೆ

ಆನೇಕಲ್, ಜು.೩೧: ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಜೊತೆಗೆ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಅವರನ್ನು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ವೈಟ್ ಅಕಾಡೆಮಿ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ವೈಟ್ ಅಕಾಡೆಮಿ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಆನೇಕಲ್ ದೊಡ್ಡಯ್ಯ ರವರು ಹೇಳಿದರು.
ಅವರು ಹೆಬ್ಬಗೋಡಿ ನಗರ ಸಭೆ ವ್ಯಾಪ್ತಿಯ ತಿರುಪಾಳ್ಯ ಗ್ರಾಮದ ಬಳಿಯಿರುವ ವೈಟ್ ಅಕಾಡೆಮಿ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು, ವೈಟ್ ಅಕಾಡೆಮಿ ಶಾಲೆಯಲ್ಲಿರುವ ವಿದ್ಯಾಬ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರನ್ನು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ಮಾಡುವ ಉದ್ದೇಶ ನಮ್ಮದಾಗಿದ್ದು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ ತಂಡಕ್ಕೆ ಒಬ್ಬ ಶಿಕ್ಷರನ್ನು ಲೀಡರ್ ಮಾಡಿ ಆ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ನಾಯಕತ್ವ ಗುಣಗಳನ್ನು ಬೆಳೆಸುವುದು ನಮ್ಮ ಉದ್ದೇಶವಾಗಿದೆ ಎಂದರು.
ವಿದ್ಯಾರ್ಥಿಗಳು ಕಲಿಕೆಯ ಸಮಯದಲ್ಲಿ ಬೇರೆಡೆಗೆ ಆಕರ್ಷಣೆಗೆ ಒಳಗಾಗದೆ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ತಾವು ಓದಿದ ಶಾಲೆಗೆ ಮತ್ತು ಗ್ರಾಮಕ್ಕೆ ಹೆಸರು ತರುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೈಟ್ ಅಕಾಡೆಮಿ ಶಾಲೆಯ ಕಾರ್ಯದರ್ಶಿಯಾದ ಅರುಣಕುಮಾರಿ, ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ, ರಾಷ್ಠೀಯ ಮಟ್ಟದ ಕ್ರೀಡಾಪಟು ಜೀವನ್, ವೈಟ್ ಅಕಾಡೆಮಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.