
ಬಾಗಲಕೋಟೆ: ಸೆ 15 : ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕಲಬುರಗಿ ವಲಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವರು.
ಈ ಪಂದ್ಯಾವಳಿಯನ್ನು ಸೆಪ್ಟೆಂಬರ್ 12 ಮತ್ತು 13 ರಂದು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಬಾಗಲಕೋಟೆಯ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿತ್ತು. ಈ ಪಂದ್ಯಾವಳಿಯಲ್ಲಿ ಕಲಬುರಗಿ ವಲಯದ ವಿವಿಧ ಆರೋಗ್ಯ ವಿಜ್ಞಾನ ಸಂಸ್ಥೆಗಳ ಸುಮಾರು 35 ತಂಡಗಳು ಭಾಗವಹಿಸಿದ್ದವು. ಈ ಪಂದ್ಯಾವಳಿಯಲ್ಲಿ ಎಸ್.ಎನ್.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ವಿದ್ಯಾರ್ಥಿನಿಯರು ಅಂತಿಮ ಪಂದ್ಯದಲ್ಲಿ ಇಲಕಲ್‍ನ ಎಸ್.ವಿ.ಎಮ್ ಆಯುರ್ವೇದ ಮೆಡಿಕಲ್ ಕಾಲೇಜಿನ ತಂಡವನ್ನು ಎದುರಿಸಿ ಪ್ರಥಮ ಸ್ಥಾನ ಪಡೆದರು ಮತ್ತು ಪುರುಷರ ವಿಭಾಗದಲ್ಲಿ ವಿದ್ಯಾರ್ಥಿಗಳು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜ್ ತಂಡದ ವಿರುದ್ಧ ದ್ವಿತೀಯ ಸ್ಥಾನ ಪಡೆದರು.
ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಡಾ.ಸಂತೋಷ ಶೀಲವಂತ ಮತ್ತು ದೈಹಿಕ ನಿರ್ದೇಶಕ ಡಾ.ವಿಜಯಕುಮಾರ ಹಿರೇಮಠ ಈ ಕ್ರೀಡಾಕೂಟದ ನೇತೃತ್ವ ವಹಿಸಿದ್ದರು.
ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ ಮತ್ತು ಡಾ.ಸೊಲಬನ್ನವರ್ ಅಭಿನಂದಿಸಿದ್ದಾರೆ.