ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು

ಸುಳ್ಯ, ಜೂ.೧- ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ, ಕಡಬ ತಾಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಮನೆತನದ ಬೆಂಗಳೂರಿನ ಉದ್ಯಮಿ ದಿನೇಶ್ ಕೆ. ಅವರ ಪುತ್ರಿ ಪ್ರತೀಕ್ಷಾ (೨೧) ಅವರು ಭಾನುವಾರ ರಾತ್ರಿ ರಕ್ತದೊತ್ತಡ ಕುಸಿತಕ್ಕೊಳಗಾಗಿ ಬೆಂಗಳೂರಿನಲ್ಲಿ ನಿಧನರಾದರು. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಪ್ರತೀಕ್ಷಾ ಬೆಂಗಳೂರಿನ ಮನೆಗೆ ಹೋಗಿದ್ದರು. ಅಸೌಖ್ಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಅವರು ತಂದೆ,ತಾಯಿ, ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ.