ವೈದ್ಯಕೀಯ ಶಿಕ್ಷಣ ಸಚಿವರ ಪರಿಷ್ಕೃತ ಪ್ರವಾಸ

ಕಲಬುರಗಿ,ಜು.30: ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಪರಿಷ್ಕೃತ ಪ್ರವಾಸ ಪಟ್ಟಿಯಂತೆ ಸಚಿವರು ರಾಯಚೂರಿನಿಂದ ರಸ್ತೆ‌ ಮೂಲಕ ಜುಲೈ 30 ರಂದು ರಾತ್ರಿ 9.30 ಗಂಟೆಗೆ ಕಲಬುರಗಿ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಜುಲೈ 31 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಚೆಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕವು ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ 11.30 ಗಂಟೆಗೆ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡುವರು.