ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಡಿ.01:ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹುಲಸೂರುದಿಂದ ರಸ್ತೆ ಮೂಲಕ ಡಿಸೆಂಬರ್ 2 ರಂದು ಶನಿವಾರದಂದು ರಾತ್ರಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಡಿಸೆಂಬರ್ 3 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಯದೇವ ಆಸ್ಪತ್ರೆಯ ಹೊಸ ಕಟ್ಟಡ ವೀಕ್ಷಣೆ ಮಾಡುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದ್‍ಗೆ ಪ್ರಯಾಣಿಸುವರು.