ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಡಿ.08:ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ ಡಿಸೆಂಬರ್ 8 ರಂದು ರಾತ್ರಿ 9.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.

ಡಿಸೆಂಬರ್ 9 ರಂದು ಶನಿವಾರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.      ಡಿಸೆಂಬರ್ 10 ರಂದು ಭಾನುವಾರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಂಜೀವಿನಿ ನೌಕರರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ಕಲಬುರಗಿ ಕೆ.ಜಿ.ಟಿ.ಟಿ.ಐ.ಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ರಸ್ತೆ ಮುಲಕ ಹೈದ್ರಾಬಾದ್‍ಗೆ ಪ್ರಯಾಣಿಸುವರು.