ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಜ.22:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಜನವರಿ 23 ರಂದು ಮಂಗಳವಾರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಖೂಬಾ ಕಲ್ಯಾಣ ಮಂಟಪದಲ್ಲಿ ಕಲಬುರಗಿ ವಿಜಯವಾಣಿ ಪತ್ರಿಕೆಯಿಂದ ಏರ್ಪಡಿಸಲಾದ ಏಜ್ಯುಕೇಶನ್ ಎಕ್ಸ್‍ಪೋ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ ವತಿಯಿಂದ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಜಿಮ್ಸ್) ಅಂಬುಲೆನ್ಸ್ ವಾಹನ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ಸೇಡಂ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅರೆಬೊಮ್ಮನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಸಂಘದ ವತಿಯಿಂದ ಕೆರೆ ನಿರ್ಮಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಸೇಡಂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ ವತಿಯಿಂದ ಸೇಡಂ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಂಬುಲೆನ್ಸ್ ವಾಹನ ವಿತರಿಸುವ ಕಾರ್ಯಕ್ರಮದಲ್ಲಿ ಭಾಘವಹಿಸುವರು. ಮಧ್ಯಾಹ್ನ 2.30 ಗಂಟೆಗೆ ಸೇಡಂ ಸುವರ್ಣ ಭವನದಲ್ಲಿ ಅಖಿಲ ಭಾರತ ವಿಶ್ವಕರ್ಮ ಮಹಾಸಭಾ ಚಾರಿಟೇಬಲ್ ಟ್ರಸ್ಟ್ ಸೇಡಂ ಇವರಿಂದ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜನವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಇ.ಎಸ್.ಐ. ಆಸ್ಪತ್ರೆಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಸೇಡಂ ತಾಲೂಕಿನ ಮದಕಲ್ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜನವರಿ 25 ರಂದು ಮಧ್ಯಾಹ್ನ 1.05 ಗಂಟೆಗೆ ಕಲಬುರಗಿಯಿಂದ ಸ್ಟಾರ್ ಏರ್ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.